Saturday, July 2, 2022
Home ಸಮಾಚಾರ ಸಂಘಸಂಗತಿ 73ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ

73ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ

ಉಡುಪಿ: ಕಡಿಯಾಳಿಯ ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಾಮಾಜಿಕ ಮತ್ತು ಸೇವಾ ಪ್ರಕಲ್ಪ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮೂಡಬೆಟ್ಟು ವಾರ್ಡಿ ದಲಿತ ಸಮುದಾಯದ ಕಸ್ತೂರಿ ಮತ್ತು ಸಂಜೀವ ದಂಪತಿ ಮನೆಗೆ ಉಚಿತ ವಿದ್ಯುತ್ ಸಂಪರ್ಕ ನೀಡುವ ಮೂಲಕ 73ನೇ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಯಿತು.

ಈ ಮನೆಯ ಉಚಿತ ವಿದ್ಯುತ್ ಸಂಪರ್ಕದ ಸಂಪೂರ್ಣ ವೆಚ್ಚವನ್ನು ಜ್ಯೋತಿ ಎಸ್. ತಂತ್ರಿ ನೀಡಿದರು.

ಈ ಸಂದರ್ಭದಲ್ಲಿ ಮೂಡಬೆಟ್ಟು ವಾರ್ಡ್ ನಗರಸಭಾ ಸದಸ್ಯ ಶ್ರೀಶ ಕೊಡವೂರು, ಶಂಕರ ಪೂಜಾರಿ ಮಧ್ವನಗರ, ನಿತ್ಯಾನಂದ ಶೆಟ್ಟಿ ಕಂಗಣಬೆಟ್ಟು, ಶೇಖರ್ ಅಮೀನ್ ಚನ್ನದಂಗಡಿ, ಜಗದೀಶ್ ಅಮೀನ್ ಇದ್ದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮತ್ತು ಆಸರೆ ಚಾರಿಟೇಬಲ್ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರ್ವಹಿಸಿದರು. ನಗರಸಭೆ ಮಾಜಿ ಸದಸ್ಯ ಸುರೇಶ್ ಶೆಟ್ಟಿ ಸ್ವಾಗತಿಸಿದರು.ಕಡಿಯಾಳಿ ಗಣೇಶೋತ್ಸವ ಸಮಿತಿಯ ರಾಕೇಶ್ ಜೋಗಿ ವಂದಿಸಿದರು.

ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕನ್ನರ್ಪಾಡಿ ಸೋನಿ ಎಲೆಕ್ಟ್ರಿಕಲ್ಸ್ನ ಜನಾರ್ದನ ನಿರ್ವಹಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!