ಉಡುಪಿ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 3 ಮಂದಿ ಕಲಾವಿದರ ಕುಟುಂಬಕ್ಕೆ ತಲಾ 25 ಸಾವಿರ ರೂ. ಆರ್ಥಿಕ ನೆರವನ್ನು ಇಲ್ಲಿನ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ನೀಡಲಾಯಿತು.
ಪ್ರತಿಷ್ಠಾನ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ ಮತ್ತು ಪ್ರಭಾವತಿ ಶೆಣೈ ಚೆಕ್ ನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು
ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಪ್ರೊ. ಶಂಕರ್, ಉಪಾಧ್ಯಕ್ಷ ಮರವಂತೆ ನಾಗರಾಜ ಹೆಬ್ಬಾರ್, ಸಂಚಾಲಕ ರವಿರಾಜ್ ಎಚ್. ಪಿ. ಇದ್ದರು.