ಉಡುಪಿ: ರೆಕ್ಕೆ ಮುರಿತಕ್ಕೊಳಗಾಗಿ ಹಾರಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದ ಗರುಡ ಪಕ್ಷಿಯನ್ನು ರಕ್ಷಿಸಲಾಗಿದೆ.
ಇಲ್ಲಿಗೆ ಸಮೀಪದ ಉದ್ಯಾವರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಕಂಡುಬಂದ ಗರುಡ ಪಕ್ಷಿಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ರಾಮದಾಸ ಪಾಲನ್ ಉದ್ಯಾವರ ಮತ್ತು ತಾರಾನಾಥ ಮೇಸ್ತ ಶಿರೂರು ರಕ್ಷಿಸಿದ್ದು, ಬಳಿಕ ಉಪವಲಯ ಅರಣ್ಯಾಧಿಕಾರಿ ಗುರುರಾಜ್ ಕಾವ್ರಾಡಿ ವಶಕ್ಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಅರಣ್ಯ ರಕ್ಷಕ ಕೇಶವ ಪೂಜಾರಿ, ಸಿಬ್ಬಂದಿ ಜೋಯ್ ಇದ್ದರು
ಗಾಯಾಳು ಗರುಡ ಪಕ್ಷಿಯ ರಕ್ಷಣೆ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...