ಬ್ರಹ್ಮಾವರ: ಇಲ್ಲಿನ ರೋಟರಿ ಹಾಲ್ ನಲ್ಲಿ ರೋಟರಿ ಕ್ಲಬ್ ಬ್ರಹ್ಮಾವರ ಆಶ್ರಯದಲ್ಲಿ ನಮ್ಮ ಜನರ ಸುರಕ್ಷೆ- ನಮ್ಮ ಗುರಿ ಸಂವಾದ ಕಾರ್ಯಕ್ರಮ ನಡೆಯಿತು.
ಬ್ರಹ್ಮಾವರ ಬಸ್ ನಿಲ್ದಾಣ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಹಾಗೂ ಆಸುಪಾಸಿನ ಮುಖ್ಯ ರಸ್ತೆಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕರಿ ರಘುಪತಿ ಭಟ್ ಅವರಿಗೆ ಮನವಿ ಮಾಡಿದರು.
ಅದಕ್ಕೆ ಸ್ಪಂದಿಸಿದ ಶಾಸಕ ಭಟ್, ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸುವ ಮೂಲಕ ಅಪಘಾತ ನಿಯಂತ್ರಿಸುವ ಭರವಸೆ ನೀಡಿದರು.
ಬ್ರಹ್ಮಾವರ ತಾಲೂಕು ಪಂಚಾಯತ್ ಅಧ್ಯಕ್ಷೆ ಜ್ಯೋತಿ ಉದಯಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ರೋಟರಿ ಕ್ಲಬ್ ಬ್ರಹ್ಮಾವರ ಅಧ್ಯಕ್ಷ ಆರೂರು ತಿಮ್ಮಪ್ಪ ಶೆಟ್ಟಿ, ಕಾರ್ಯದರ್ಶಿ ಗುರುರಾಜ್ ಎನ್., ಲಯನ್ಸ್ ಕ್ಲಬ್ ಅಧ್ಯಕ್ಷ ಜಯರಾಮ್ ಶೆಟ್ಟಿ, ಸೀನಿಯರ್ ಸಿಟಿಜನ್ಸ್ ಅಧ್ಯಕ್ಷ ಉದಯ್ ಕುಮಾರ್, ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ರಾಜಾರಾಮ ಶೆಟ್ಟಿ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಕೋಟ ಪೊಲೀಸ್ ಉಪನಿರೀಕ್ಷಕಿ ಪುಷ್ಪಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ. ಪಿ. ಗಂಗಾಧರ್, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ, ಬ್ರಹ್ಮಾವರ ಸಮುದಾಯ ಕೇಂದ್ರ ವೈದ್ಯಾಧಿಕಾರಿ ಅಜಿತ್ ಕುಮಾರ್ ಶೆಟ್ಟಿ ಮೊದಲಾದವರಿದ್ದರು.
ನಮ್ಮ ಜನರ ಸುರಕ್ಷೆ- ನಮ್ಮ ಗುರಿ ಸಂವಾದ ಕಾರ್ಯಕ್ರಮ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...