ಉಡುಪಿ: ಇತರರ ನೋವಿಗೆ ಸ್ಪಂದಿಸುವ ಗುಣ ಕೇವಲ ಮನುಷ್ಯರಲ್ಲಿ ಮಾತ್ರ ಕಾಣಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಕೈಲಾದ ಸೇವೆ, ಸಹಕಾರವನ್ನು ಸಮಾಜದ ಅರ್ಹರಿಗೆ ಮಾಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಉಡುಪಿ ತುಳುಕೂಟ ಅಧ್ಯಕ್ಷ, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಪ್ರಬಂಧಕ, ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿರ್ದೇಶಕ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ರಾಜ್ಯ ಸಹಕಾರ ಮಹಾಮಂಡಲ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತುಳುಕೂಟ ವತಿಯಿಂದ ಆಯೋಜಿಸಿದ್ದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಪತ್ರಕರ್ತ ಶ್ರೀಕಾಂತ ಶೆಟ್ಟಿ ಅಭಿನಂದನ ಭಾಷಣ ಮಾಡಿದರು.
ಉದ್ಯಮಿ ಪುರುಷೋತ್ತಮ ಶೆಟ್ಟಿ, ತುಳುಕೂಟ ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ. ಜಿ., ಹಿರಿಯ ವಕೀಲ ಶಾಂತರಾಮ ಶೆಟ್ಟಿ, ಲಯನ್ಸ್ ಗವರ್ನರ್ ವಿಶ್ವನಾಥ್ ಶೆಟ್ಟಿ, ತುಳು ಅಕಾಡೆಮಿ ಸದಸ್ಯೆ ತಾರಾ ಆಚಾರ್ಯ, ಹಾಸ್ಯ ಸಾಹಿತಿ ಸಂಧ್ಯಾ ಶೆಣೈ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಹಫೀಜ್ ರೆಹಮಾನ್ ಮತ್ತು ರಾಘವೇಂದ್ರ, ತೋನ್ಸೆ ಮನೋಹರ್ ಶೆಟ್ಟಿ ಇದ್ದರು.
ತುಳುಕೂಟ ಉಪಾಧ್ಯಕ್ಷ ಮುಹ್ಮಮದ್ ಮೌಲಾ ಸ್ವಾಗತಿಸಿ, ರತ್ನಾಕರ ಇಂದ್ರಾಳಿ ವಂದಿಸಿದರು. ಯಶೋದಾ ಕೇಶವ್ ಸಹಕರಿಸಿದರು