Thursday, July 7, 2022
Home ಸಮಾಚಾರ ಸಂಘಸಂಗತಿ ಜಾನಪದ ಕಲಾವಿದರಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ

ಜಾನಪದ ಕಲಾವಿದರಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
*******************************

(ಸುದ್ದಿಕಿರಣ ವರದಿ)

ಉಡುಪಿ, ಜು. 6: ಲಾಕ್ ಡೌನ್ ಅವಧಿಯಲ್ಲಿ ಸಂಕಷ್ಟದಲ್ಲಿದ್ದ ಜಾನಪದ ಕಲಾವಿದರಿಗೆ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಘಟಕ ಆಶ್ರಯದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಸಹಯೋಗದೊಂದಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಲಾಯಿತು.

ಕಳೆದ ವರ್ಷ ಸುಮಾರು 250 ಮಂದಿ ಜಾನಪದ ಕಲಾವಿದರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಗಿತ್ತು. ಈ ಬಾರಿ 350 ಮಂದಿ ಕಲಾವಿದರಿಗೆ ನೆರವು ನೀಡಲಾಗಿದೆ.

ಅಕ್ಕಿ, ಬೇಳೆ ಮತ್ತಿತರ ಜೀವನಾವಶ್ಯಕ ವಸ್ತುಗಳನ್ನೊಳಗೊಂಡ ಕಿಟ್ ಗಳನ್ನು ಕಾರ್ಕಳ, ಕಾಪು, ಮಣಿಪುರ ಮೊದಲಾದೆಡೆಗಳ ಸ್ಥಳೀಯ ಕಲಾವಿದರಿಗೆ ವಿತರಿಸಲಾಗಿದೆ.

ಜೊತೆಗೆ ಸರ್ಕಾದಿಂದ ದೊರೆಯುವ ಸಹಾಯಧನಕ್ಕಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವ ಕುರಿತು ಮಾಹಿತಿ ನೀಡಿ, ಉತ್ತೇಜಿಸಲಾಗಿದೆ.

ಕೋವಿಡ್ ಸುರಕ್ಷತೆ ಕ್ರಮಗಳ ಕುರಿತು ಅರಿವು, ತಮ್ಮ ಮಕ್ಕಳ ವಿದ್ಯಾಭ್ಯಾಸದ ಕುರಿತು ವಹಿಸಬೇಕಾದ ಕಾಳಜಿ ಹಾಗೂ ದುಡಿಯುವ ಹಂತದಲ್ಲಿ ಉಳಿತಾಯ ಮನೋಭಾವ ಕುರಿತು ಮಾಹಿತಿ ನೀಡಲಾಯಿತು.

ಉಡುಪಿ ಜಿಲ್ಲೆಯ ಜಾನಪದ ಕಲಾವಿದರ ಮಾಹಿತಿ ದತ್ತಾಂಶ ಕಲೆಹಾಕುವ ಕೆಲಸ ಈಗಾಗಲೇ ಆರಂಭವಾಗಿದ್ದು, ಪ್ರಗತಿಯಲ್ಲಿದೆ. ಶಾಲಾ ಕಾಲೇಜು ಆರಂಭದ ನಂತರ ಪ್ರತಿಯೊಂದು ತಾಲೂಕು ಘಟಕದ ಮೂಲಕ ವಿದ್ಯಾರ್ಥಿಗಳಿಗೆ ಸ್ಥಳೀಯ ಜಾನಪದ ಕಲೆಗಳ ಕುರಿತು ಅರಿವು ಮೂಡಿಸಿ, ಆಸಕ್ತಿ ಬೆಳೆಸುವ ಕೆಲಸ ಕೈಗೊಳ್ಳಲಿದೆ.
ಜಿಲ್ಲೆಯ ಪ್ರಮುಖ ಕಲಾಪೋಷಕ, ಸಾಮಾಜಿಕ ನೇತಾರ, ಸ್ವತಃ ಕಲಾವಿದರೂ ಆಗಿರುವ ಡಾ| ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆಯಲ್ಲಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಮತ್ತು ನಿವೃತ್ತ ಐ.ಎ.ಎಸ್. ಅಧಿಕಾರಿ ಡಾ| ಟಿ. ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ರಾಜ್ಯ ಘಟಕಗಳು ಕಲೆ ಮತ್ತು ಕಲಾವಿದರ ಸಂರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಹುರುಪಿನಿಂದ ಕಾರ್ಯನಿರ್ವಹಿಸುತ್ತಿವೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!