Thursday, July 7, 2022
Home ಸಮಾಚಾರ ಸಂಘಸಂಗತಿ ಕಲಾವಿದರಿಗೆ ಆಹಾರದ ಕಿಟ್ ವಿತರಣೆ

ಕಲಾವಿದರಿಗೆ ಆಹಾರದ ಕಿಟ್ ವಿತರಣೆ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

(ಸುದ್ದಿಕಿರಣ ವರದಿ)

ಉಡುಪಿ, ಜು. 10: ಬೆಂಗಳೂರಿನ ಪ್ರವರ ಹಾಗೂ ಅಶ್ವಘೋಷ ಥಿಯೇಟರ್ ಪ್ರಾಯೋಜಕತ್ವದಲ್ಲಿ ಇಲ್ಲಿನ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ 35 ನಾಟಕ ಹಾಗೂ ಯಕ್ಷಗಾನ ಕಲಾವಿದರಿಗೆ ಸುಮಾರು ತಲಾ 1,000 ರೂ. ಮೊತ್ತದ ಆಹಾರದ ಕಿಟ್ ವಿತರಿಸಲಾಯಿತು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ ಮತ್ತು ಉಪಾಧ್ಯಕ್ಷ ಮಧುಸೂದನ ಹೇರೂರು ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನ ಸಂಚಾಲಕ ರವಿರಾಜ್ ಎಚ್. ಪಿ., ಯಕ್ಷಗಾನ ಕಲಾವಿದ ಶಾಂತಾರಾಮ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!