ಕಾರ್ಕಳ: ಕೋವಿಡ್ ಸಂಕಷ್ಟ ಕಾಲದಲ್ಲಿ ಅಗತ್ಯವಿರುವ ರೋಗಿಗಳಿಗೆ ಇಲ್ಲಿನ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ನೆತ್ತರ ನೆರವು ಕಾರ್ಯಕ್ರಮ ಆಯೋಜಿಸಲಾಗುವುದು. ಮೇ 1ರಂದು ಸ್ಥಳೀಯ ರಾಮಪ್ಪ ಅನುದಾನಿತ ಶಾಲೆಯಲ್ಲಿ ರಕ್ತದಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
ಕೆಲವೇ ದಿನಗಳಲ್ಲಿ ದೇಶಾದ್ಯಂತ ಕೊರೊನಾ ವಿರುದ್ಧ ಲಸಿಕೆ ಅಭಿಯಾನ ಆರಂಭವಾಗಲಿದೆ. ಕೋವಿಡ್ ಲಸಿಕೆ ಸ್ವೀಕರಿಸಿದ ಬಳಿಕ ರಕ್ತದಾನ ಮಾಡಲು ಅವಕಾಶ ಇಲ್ಲ. ಹೀಗಾಗಿ ಮುಂದಿನ ಒಂದೆರಡು ತಿಂಗಳ ಕಾಲ ದೇಶಾದ್ಯಂತ ರಕ್ತದ ಕೊರತೆ ತೀವ್ರವಾಗಿ ಬಾಧಿಸಲಿದೆ. ಅದನ್ನು ಮನಗಂಡು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಸರ್ಕಾರಿ ರಕ್ತ ನಿಧಿಗೆ ರಕ್ತದಾನ ಮಾಡಿ ಆರೋಗ್ಯ ಇಲಾಖೆಯೊಂದಿಗೆ ಕೋವಿಡ್ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ