Saturday, July 2, 2022
Home ಸಮಾಚಾರ ಸಂಘಸಂಗತಿ ಪಂಚಪವಿತ್ರ ಗಿಡಗಳ ವಿತರಣೆ ಅಭಿಯಾನ

ಪಂಚಪವಿತ್ರ ಗಿಡಗಳ ವಿತರಣೆ ಅಭಿಯಾನ

ಉಡುಪಿ: ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಭಾರತೀಯ ಜನೌಷಧಿ ಕೇಂದ್ರ ಹಾಗೂ ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಸುಮಾರು 60 ದೇವಾಲಯಗಳಿಗೆ ಪಂಚಪವಿತ್ರ ಗಿಡಗಳ ವಿತರಣೆ ಅಭಿಯಾನ ಬುಧವಾರ ಜನೌಷಧಿ ಕೇಂದ್ರ ವಠಾರದಲ್ಲಿ ನಡೆಯಿತು.

ಗಿಡಗಳನ್ನು ವಿತರಿಸಿ ಚಾಲನೆ ನೀಡಿದ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇದೊಂದು ಮಾದರಿ ಕಾರ್ಯಕ್ರಮ. ರಾಜ್ಯದ 34,500 ಮುಜರಾಯಿ ದೇವಾಲಯಗಳಲ್ಲಿ ಕನಿಷ್ಟ 10 ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಕೋವಿಡ್ ಸಮಯದಲ್ಲಿ ಆಮ್ಲಜನಕದ ಮಹತ್ವ ಎಲ್ಲರಿಗೂ ತಿಳಿದಿದೆ. ಆದ್ದರಿಂದ ಎಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕಾಗಿದೆ ಎಂದರು.

ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕುಡೆ ಅಧ್ಯಕ್ಷತೆ ವಹಿಸಿದ್ದರು.

ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ ಹೇರೂರು, ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಮಹೇಶ್ ಐತಾಳ, ಗಿಡಗಳ ಪ್ರಾಯೋಜಕರಾದ ಸುವರ್ಣ ಎಂಟರ್ ಪ್ರೈಸಸ್ ಮುಖ್ಯಸ್ಥೆ ಸುನೀತಾ ಮಧುಸೂದನ್, ವೈದ್ಯಕೀಯ ಪ್ರತಿನಿಧಿ ಸಂಘ ಕಾರ್ಯದರ್ಶಿ ಪ್ರಸನ್ನ ಕಾರಂತ್, ಶ್ರೀನಾಥ್ ಕೋಟ, ಮಿಲ್ಟನ್ ಒಲಿವರ್, ವಿವೇಕಾನಂದ ಕಾಮತ್ ಮೊದಲಾದವರಿದ್ದರು.

ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ವಿವಿಧ ದೇವಾಲಯಗಳ ಪ್ರತಿನಿಧಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!