Monday, July 4, 2022
Home ಸಮಾಚಾರ ಸಂಘಸಂಗತಿ ದಕ್ಷತೆಯಿಂದ ಕಾರ್ಯನಿರ್ವಹಿಸಿದಲ್ಲಿ ಯಶಸ್ಸು ಖಚಿತ

ದಕ್ಷತೆಯಿಂದ ಕಾರ್ಯನಿರ್ವಹಿಸಿದಲ್ಲಿ ಯಶಸ್ಸು ಖಚಿತ

ಮಣಿಪಾಲ, ಜು. 11 (ಸುದ್ದಿಕಿರಣ ವರದಿ): ಕೋವಿಡ್ ಸಂದರ್ಭದಲ್ಲಿ ಅನೇಕ ಕಷ್ಟ ನಷ್ಟಗಳನ್ನು ಅನುಭವಿಸಿದರೂ ಅನೇಕ ಮಹಿಳಾ ಸ್ವ ಉದ್ಯೋಗಿಗಳು ಧೃತಿಗೆಡದೇ ಮತ್ತೆ ತಮ್ಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದನ್ನು ನೋಡಿದಾಗ ಸಂತೋಷವಾಗುತ್ತದೆ. ಕೊರೊನಾ ಮಹಾಮಾರಿಯ ಹೊರತಾಗಿಯೂ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಉತ್ತಮ ದಕ್ಷತೆಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ಖಚಿತ ಎಂದು ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮಹಾಪ್ರಬಂಧಕ ಭಾಸ್ಕರ ಹಂದೆ ಹೇಳಿದರು.

ಇಲ್ಲಿನ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ತರಬೇತಿ ಪಡೆದ ಫಲಾನುಭವಿ ಫ್ಲೋರಾ ರಾಡ್ರಿಗಸ್ ಎಂಬವರಿಗೆ ಸ್ವತಃ ಉಚಿತವಾಗಿ ನೀಡಿದ ಹೊಲಿಗೆ ಯಂತ್ರ ಹಸ್ತಾಂತರಿಸಿ ಮಾತನಾಡಿದರು.

ಭಾರತೀಯ ವಿಕಾಸ ಟ್ರಸ್ಟಿನ ಹಿರಿಯ ಸಲಹೆಗಾರ ಶ್ರೀಕಾಂತ ಹೊಳ್ಳ ಸ್ವಾಗತಿಸಿದರು. ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ಪ್ರಸ್ತಾವನೆಗೈದರು. ಮಾನವ ಸಂಪನ್ಮೂಲ ವಿಭಾಗದ ಗೀತಾ ಆರ್. ರಾವ್ ವಂದಿಸಿದರು. ಕಾರ್ಯಕ್ರಮ ಅಧಿಕಾರಿ ಪ್ರತಿಮಾ ನಿರೂಪಿಸಿದರು. ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ ಇದ್ದರು.

 

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!