Monday, July 4, 2022
Home ಸಮಾಚಾರ ಸಂಘಸಂಗತಿ ಸಚ್ಚಾರಿತ್ರ್ಯದಿಂದ ಯಶಸ್ಸು

ಸಚ್ಚಾರಿತ್ರ್ಯದಿಂದ ಯಶಸ್ಸು

ಉಡುಪಿ: ವಿದ್ಯಾರ್ಥಿಗಳು ಸಚ್ಚಾರಿತ್ರ್ಯ ಮೈಗೂಡಿಸಿಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ರೆಡ್ ಕ್ರಾಸ್ ಸಭಾಪತಿ ಡಾ| ತಲ್ಲೂರು ಶಿವರಾಮ ಶೆಟ್ಟಿ ಕಿವಿಮಾತು ಹೇಳಿದರು.

ಅಜ್ಜರಕಾಡು ಡಾ| ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಥಮ ವರ್ಷದ ಯುವ ರೆಡ್ ಕ್ರಾಸ್ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಅಭಿವಿನ್ಯಾಸ ಹಾಗೂ ಪ್ರಸ್ತುತ ವರ್ಷದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗೌತಮ ಬುದ್ಧನ ಜೀವನ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು ಎಂದವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಎಸ್., ಸಮಾಜಮುಖಿ ಸಂಘಸಂಸ್ಥೆಗಳ ಮೂಲ ಉದ್ದೇಶ ಮಾನವೀಯತೆ. ಅದನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಯುವ ರೆಡ್ ಕ್ರಾಸ್ ಅಧಿಕಾರಿ ಸುನಿಲ್ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಜಯರಾಮ ಆಚಾರ್ಯ, ಯುವ ರೆಡ್ ಕ್ರಾಸ್ ಸದಸ್ಯರಾಗುವುದರಿಂದ ಆಗುವ ಪ್ರಯೋಜನ ವಿವರಿಸಿದರು.

ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಶೋಭಾ ಆರ್. ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಮೇಘನಾ ಹಾಗೂ ಪವಿತ್ರ ನಿರೂಪಿಸಿ, ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!