Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಪರ್ಯಾಯೋತ್ಸವ: ಮುಖ್ಯಮಂತ್ರಿಗೆ ಆಹ್ವಾನ

ಪರ್ಯಾಯೋತ್ಸವ: ಮುಖ್ಯಮಂತ್ರಿಗೆ ಆಹ್ವಾನ

ಸುದ್ದಿಕಿರಣ ವರದಿ
ಗುರುವಾರ, ಜನವರಿ 6, 2022

ಪರ್ಯಾಯೋತ್ಸವ: ಮುಖ್ಯಮಂತ್ರಿಗೆ ಆಹ್ವಾನ
ಬೆಂಗಳೂರು: ಈ ತಿಂಗಳ 18ರಂದು ನಡೆಯಲಿರುವ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಾಧ್ಯಕ್ಷ ಹಾಗೂ ಶಾಸಕ ಕೆ. ರಘುಪತಿ ಭಟ್ ಗುರುವಾರ ಆಮಂತ್ರಣಪತ್ರ ನೀಡಿ ಆಹ್ವಾನಿಸಿದರು.

ಪರ್ಯಾಯ ಮಹೋತ್ಸವ ಸುಗಮವಾಗಿ ನಡೆಸಲು ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಈ ಸಂದರ್ಭದಲ್ಲಿ ಅವರು ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಎಂ. ಕಾರಜೋಳ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಭಾರತಿ ಶೆಟ್ಟಿ ಮತ್ತು ಪರ್ಯಾಯೋತ್ಸವ ಸಮಿತಿ ಉಪಾಧ್ಯಕ್ಷ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕ ಜಯಪ್ರಕಾಶ್ ಕೆದ್ಲಾಯ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!