ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಆಮೂಲಕ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದರು.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ಈ
ಸಂದರ್ಭದಲ್ಲಿ ನಿರ್ಗಮಿತ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಡಾ ಸಿ ಎನ್ ಅಶ್ವಥ್ ನಾರಾಯಣ ಮೊದಲಾದವರಿದ್ದರು.