Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಉ.ಕ. ಜಿಲ್ಲಾ ಪ್ರವಾಸ ಮೊಟಕುಗೊಳಿಸಿದ ಸಿಎಂ

ಉ.ಕ. ಜಿಲ್ಲಾ ಪ್ರವಾಸ ಮೊಟಕುಗೊಳಿಸಿದ ಸಿಎಂ

ಸುದ್ದಿಕಿರಣ ವರದಿ
ಬುಧವಾರ, ಜುಲೈ 13

ಉ.ಕ. ಜಿಲ್ಲಾ ಪ್ರವಾಸ ಮೊಟಕುಗೊಳಿಸಿದ ಸಿಎಂ
ಉಡುಪಿ: ಮಳೆ ಹಾನಿ ಸಮೀಕ್ಷೆ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಮೊಟಕುಗೊಳಿಸಿ, ಉಡುಪಿ ಜಿಲ್ಲೆಗೆ ಸೀಮಿತಗೊಳಿಸಿದ್ದಾರೆ.

ಬುಧವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಗೊರಟೆ ಗ್ರಾಮದಲ್ಲಿ ಕಡಲು ಕೊರೆತದಿಂದ ಉಂಟಾದ ಹಾನಿ ವೀಕ್ಷಣೆ ಮಾಡಲಿದ್ದರು.

ಅದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ‌ಕಚೇರಿ ಸಭಾಂಗಣದಲ್ಲಿ ಉಡುಪಿ ಮತ್ತು ದ.ಕ. ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿತ್ತು.

ಇದೀಗ ಉ.ಕ. ಜಿಲ್ಲಾ ಪ್ರವಾಸ ಮೊಟಕುಗೊಳಿಸಿದ ಸಿಎಂ ಬೆಳಿಗ್ಗೆ 10 ಗಂಟೆಗೆ ಪೂರ್ವನಿಗದಿಯಾದಂತೆ ಸಭೆ ನಡೆಸುವರು.

ಬಳಿಕ ಕೃಷ್ಣಮಠಕ್ಕೆ ಭೇಟಿ ನೀಡುವರು.

ಬಳಿಕ ಉಡುಪಿ ಜಿಲ್ಲೆಯ ನೆರೆ ಪೀಡಿತ ಹಾಗೂ ಕಡಲ್ಕೊರೆತ ಪ್ರದೇಶಗಳಿಗೂ ಭೇಟಿ ನೀಡುವರು ಎಂದು ತಿಳಿದುಬಂದಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!