ಸುದ್ದಿಕಿರಣ ವರದಿ
ಭಾನುವಾರ, ಜುಲೈ 31
ಮೋಹನದಾಸ್ ಪೈ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ
ಬೆಂಗಳೂರು: ಹಿರಿಯ ಉದ್ಯಮಿ, ಉದಯವಾಣಿ ದಿನಪತ್ರಿಕೆ ಸಂಸ್ಥಾಕ ಟಿ. ಮೋಹನದಾಸ್ ಪೈ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೋಹನದಾಸ ಪೈ ನಿಧನ ಹೊಂದಿದ್ದಾರೆ ಎನ್ನುವ ವಿಷಯ ನನಗೆ ಆಘಾತವುಂಟು ಮಾಡಿದೆ. ಹಿರಿಯ ಚೇತನ, ಎಲ್ಲರ ಮಾರ್ಗದರ್ಶಕರಂತಿದ್ದ ಟಿ. ಮೋಹನ್ ದಾಸ್ ಪೈ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಅವರ ಕುಟುಂಬದವರಿಗೆ ಪೈ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಕೋರಿದ್ದಾರೆ.