Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಪಲಿಮಾರು ಮಠಕ್ಕೆ ಭೇಟಿಯಿತ್ತ ಸಿಎಂ

ಪಲಿಮಾರು ಮಠಕ್ಕೆ ಭೇಟಿಯಿತ್ತ ಸಿಎಂ

ಪಲಿಮಾರು ಮಠಕ್ಕೆ ಭೇಟಿಯಿತ್ತ ಸಿಎಂ

(ಸುದ್ದಿಕಿರಣ ವರದಿ)
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಲಿಮಾರು ಮಠಕ್ಕೂ ಭೇಟಿ ನೀಡಿದರು.

ಚಾತುರ್ಮಾಸ್ಯ ವ್ರತನಿಷ್ಠರಾಗಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತವರ ಕರಕಮಲಸಂಜಾತರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶ್ರೀಗಳ ಆಪ್ತ ಕಾರ್ಯದರ್ಶಿ ಗಿರೀಶ ಉಪಾಧ್ಯಾಯ ಮೊದಲಾದವರಿದ್ದರು.

ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವರಾದ ಡಾ. ಸುಧಾಕರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೌರವಿಸಿದರು.

.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!