Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲಾ ಬಿಜೆಪಿ ಕಚೇರಿಗೆ ಮುಖ್ಯಮಂತ್ರಿ ಭೇಟಿ

ಜಿಲ್ಲಾ ಬಿಜೆಪಿ ಕಚೇರಿಗೆ ಮುಖ್ಯಮಂತ್ರಿ ಭೇಟಿ

ಜಿಲ್ಲಾ ಬಿಜೆಪಿ ಕಚೇರಿಗೆ ಮುಖ್ಯಮಂತ್ರಿ ಭೇಟಿ

(ಸುದ್ದಿಕಿರಣ ವರದಿ)
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕಾರ್ಯಕ್ರಮ ನಿಮಿತ್ತ ಗುರುವಾರ ಇಲ್ಲಿಗಾಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದರು.

ಮುಖ್ಯಮಂತ್ರಿಯೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಇದ್ದರು.

ಜಿಲ್ಲಾ ಬಿಜೆಪಿ ವತಿಯಿಂದ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್ ಮತ್ತು ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಮತ್ತು ಸದಾನಂದ ಉಪ್ಪಿನಕುದ್ರು, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಮೊದಲಾದವರಿದ್ದರು.

.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!