Sunday, July 3, 2022
Home ಸಮಾಚಾರ ರಾಜ್ಯ ವಾರ್ತೆ ಪತ್ರಕರ್ತರೂ ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್

ಪತ್ರಕರ್ತರೂ ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ದ ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ್ದಾರೆ.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಮಂಗಳವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ್ದಲ್ಲದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ.

ನಿಯೋಗದಲ್ಲಿ ಪತ್ರಕರ್ತರಾದ ರವೀಶ್, ಐ. ರಾಚಪ್ಪ, ಅರುಣ್ ಕುಮಾರ್ ಮೊದಲಾದವರಿದ್ದರು.

ಅಭಿನಂದನೆ
ಕೆಯುಡಬ್ಲ್ಯೂಜೆ) ಮನವಿ ಪರಿಗಣಿಸಿ ಈ ಕ್ರಮ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!