Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಕಾಂಗ್ರೆಸ್ ಕಚೇರಿಯಲ್ಲಿ ಪ್ರವೀಣಗೆ ಶ್ರದ್ಧಾಂಜಲಿ!

ಕಾಂಗ್ರೆಸ್ ಕಚೇರಿಯಲ್ಲಿ ಪ್ರವೀಣಗೆ ಶ್ರದ್ಧಾಂಜಲಿ!

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 29

ಕಾಂಗ್ರೆಸ್ ಕಚೇರಿಯಲ್ಲಿ ಪ್ರವೀಣಗೆ ಶ್ರದ್ಧಾಂಜಲಿ!
ಅಂಕೋಲ: ಮಂಗಳೂರಿನಲ್ಲಿ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ್ ಪ್ರವೀಣ್ ನೆಟ್ಟಾರು ಹಾಗೂ ಮಹಮದ್ ಫಾಝಿಲ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು!

ರಾಜ್ಯದಲ್ಲಿ ಅವ್ಯಾಹತವಾಗಿ ನಡೆದಿರುವ ಹತ್ಯಾಕಾಂಡ ನಿಗ್ರಹಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹಂತಕರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ಎಚ್. ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತ ಗಾಂವ್ಕರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ವಿನೋದ ನಾಯಕ ಮತ್ತು ಶಾಂತಿ ಆಗೇರ, ಯುವ ಕಾಂಗ್ರೆಸ್ ಅಧ್ಯಕ್ಷ ಜೀವನ ನಾಯಕ, ಮೀನುಗಾರ ಮುಖಂಡ ರಾಜು ತಾಂಡೇಲ್, ಕಾಂಗ್ರೆಸ್ ಪಕ್ಷದ ಮುಖಂಡರಾದ ದಾಮೋದರ ಜಿ. ನಾಯ್ಕ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿ. ನಾಯ್ಕ, ಪದವಿಧರ ಕ್ಷೇತ್ರದ ತಾಲೂಕು ಅಧ್ಯಕ್ಷ ದಿನೇಶ ಪಳ್ಳಿಕೇರಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದರ್ಶನ ನಾಯ್ಕ, ಪ್ರಮುಖರಾದ ವಿಜು ಪಿಳೈ, ಸಂತೋಷ ಜೆ. ನಾಯ್ಕ ಬಾಳೆಗುಳಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಅಧ್ಯಕ್ಷ ಸುರೇಶ ಎಸ್. ನಾಯ್ಕ ಅಸ್ಲೆಗದ್ದೆ ಮುಂತಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!