Saturday, July 2, 2022
Home ಸಮಾಚಾರ ಕರಂದ್ಲಾಜೆ ಸಹಿತ ನೂತನ ಕೇಂದ್ರ ಸಚಿವರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ

ಕರಂದ್ಲಾಜೆ ಸಹಿತ ನೂತನ ಕೇಂದ್ರ ಸಚಿವರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

(ಸುದ್ದಿಕಿರಣ ವರದಿ)

ಉಡುಪಿ, ಜು. 10: ಕೇಂದ್ರ ಸಚಿವ ಸಂಪುಟದಲ್ಲಿ ನೂತನ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ಶೋಭಾ ಕರಂದ್ಲಾಜೆ ಸಹಿತ ಎಲ್ಲಾ ಕೇಂದ್ರ ಸಚಿವರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದ್ದಾರೆ.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಜೀವನ ಪ್ರಾರಂಭಿಸಿ, ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಪರಿವಾರದ ಕಟ್ಟಾಳುವಾಗಿ ಸುಮಾರು 25 ವರ್ಷಕ್ಕೂ ಮಿಕ್ಕಿದ ರಾಜಕೀಯ ಕ್ಷೇತ್ರದ ಅನುಭವದೊಂದಿಗೆ ವಿಧಾನ ಪರಿಷತ್ ಸದಸ್ಯರಾಗಿ, ರಾಜ್ಯದ ಮಾದರಿ ಇಂಧನ ಸಚಿವೆಯಾಗಿ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಯಶಸ್ವಿ ಸಚಿವೆಯಾಗಿ, 2 ಅವಧಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕ್ರಿಯಾಶೀಲ ಸಂಸದೆಯಾಗಿ ಸೇವೆ ಸಲ್ಲಿಸಿರುವ ಶೋಭಾ ಕರಂದ್ಲಾಜೆ,  ಇದೀಗ ಪ್ರಧಾನಿ ನರೇಂದ್ರ ಮೋದಿ ಸಂಪುಟದ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ನೇಮಕಗೊಂಡಿರುವುದು ಅತೀವ ಸಂತಸ ತಂದಿದೆ. ಇದು ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಸಂದ ಗೌರವ ಎಂದು ಕುಯಿಲಾಡಿ ಬಣ್ಣಿಸಿದ್ದಾರೆ.

ತಾನು ವಹಿಸಿಕೊಂಡ ಜವಾಬ್ದಾರಿಯನ್ನು ಬದ್ಧತೆ ಮತ್ತು ನಿಷ್ಠೆಯಿಂದ ನಿಭಾಯಿಸಿಕೊಂಡು ಬಂದಿರುವ ಶೋಭಾ ಕರಂದ್ಲಾಜೆ, ನೂತನ ಕೇಂದ್ರ ಸಚಿವೆಯ ಜವಾಬ್ದಾರಿಯನ್ನೂ ಸಮರ್ಥವಾಗಿ ನಿರ್ವಹಿಸುವ ವಿಶ್ವಾಸ ಇದೆ ಎಂದು ಸುರೇಶ್ ನಾಯಕ್ ಹೇಳಿದ್ದಾರೆ.

ಮೋದಿ ಸಂಪುಟದ ಒಟ್ಟು 43 ನೂತನ ಸಚಿವರಲ್ಲಿ 36 ಹೊಸ ಮುಖಗಳಿಗೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ಶೋಭಾ ಕರಂದ್ಲಾಜೆ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಎ.ನಾರಾಯಣಸ್ವಾಮಿ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬ ಅವರಿಗೂ ಜಿಲ್ಲಾ ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ ಎಂದು ಕುಯಿಲಾಡಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!