Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಕೇಂದ್ರ ನೂತನ ಸಚಿವರಿಗೆ ಅಭಿನಂದನೆ

ಕೇಂದ್ರ ನೂತನ ಸಚಿವರಿಗೆ ಅಭಿನಂದನೆ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

(ಸುದ್ದಿಕಿರಣ ವರದಿ)

ಬೆಂಗಳೂರು, ಜು. 8: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ 43 ಜನಪ್ರತಿನಿಧಿಗಳನ್ನೂ ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.

ರಾಜ್ಯದ ಸಂಸದರಾದ ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಮತ್ತು ಭಗವಂತ ಖೂಬಾ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಿದ ಪ್ರಧಾನಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ರಾಷ್ಟ್ರದ ಅಭಿವೃದ್ಧಿಗೆ ನೂತನ 43 ಸಚಿವರು ಶ್ರಮಿಸುವರೆಂಬ ವಿಶ್ವಾಸವನ್ನು ನಳಿನ್ ವ್ಯಕ್ತಪಡಿಸಿದ್ದಾರೆ.

ಯುವಕರು, ಮಹಿಳೆಯರು ಮಾತ್ರವಲ್ಲದೆ ವಿವಿಧ ಸಮುದಾಯದವರಿಗೆ ಆದ್ಯತೆ ನೀಡಲಾಗಿದೆ ಎಂದೂ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!