Tuesday, May 17, 2022
Home ಸಮಾಚಾರ ಜಿಲ್ಲಾ ಸುದ್ದಿ ಸೈಕಲ್ ಜಾಥಾ ಮೂಲಕ ಕಾಂಗ್ರೆಸ್ ಪ್ರತಿಭಟನೆ

ಸೈಕಲ್ ಜಾಥಾ ಮೂಲಕ ಕಾಂಗ್ರೆಸ್ ಪ್ರತಿಭಟನೆ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

(ಸುದ್ದಿಕಿರಣ ವರದಿ)

ಉಡುಪಿ, ಜು. 7: ಕೇಂದ್ರ ಸರ್ಕಾರ ವಿಧಿಸಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ಹಾಗೂ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಪ್ರತಿಭಟಿಸಿ ಎಐಸಿಸಿ ರಾಜ್ಯವ್ಯಾಪಿ ಮುಷ್ಕರ ಕರೆಯಂತೆ ಉಡುಪಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸೈಕಲ್ ಜಾಥಾ ನಡೆಸುವ ಮೂಲಕ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೋವಿಡ್ ಸಂಕಷ್ಟದ ಈ ದಿನಗಳಲ್ಲೂ ಎಲ್ಲಾ ವಿಧದ ದರ ಏರಿಕೆ ಮಾಡಲಾಗಿದೆ. ಖಾಸಗಿ ಬಸ್ ದರ ಕೂಡಾ ಹೆಚ್ಚಿಸಲಾಗಿದೆ. ಆ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಲೂಟಿ ಮಾಡುತ್ತಿವೆ.

ಹಿಂದೆ ಯುಪಿಎ ಸರ್ಕಾರವಿದ್ದಾಗ ತೈಲ ಬೆಲೆ ಒಂದೆರಡು ರೂ. ಹೆಚ್ಚಿದಾಗ ಪ್ರತಿಭಟಿಸುತ್ತಿದ್ದ ಬಿಜೆಪಿಗರು, ಇದೀಗ 100ರ ಗಡಿ ದಾಟಿದರೂ ತುಟಿಬಿಚ್ಚುತ್ತಿಲ್ಲ. ಮೋದಿ ಸರ್ಕಾರ ಬಡವರ ರಕ್ತ ಹೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉಸ್ತುವಾರಿ ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಶಿಧರ ಹೆಗ್ಡೆ, ಮೋದಿಯ ಅಚ್ಚೇ ದಿನ್ ಸಾಕಾಗಿ ಹೋಗಿದೆ. ಹಳೆಯ ದಿನಗಳನ್ನೇ ಮರಳಿ ಕೇಳುತ್ತಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!