Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಸೋನಿಯಾ ವಿಚಾರಣೆ ರಾಜಕೀಯ ಪ್ರೇರಿತ: ಕಾಂಗ್ರೆಸ್ ಆರೋಪ

ಸೋನಿಯಾ ವಿಚಾರಣೆ ರಾಜಕೀಯ ಪ್ರೇರಿತ: ಕಾಂಗ್ರೆಸ್ ಆರೋಪ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 22

ಸೋನಿಯಾ ವಿಚಾರಣೆ ರಾಜಕೀಯ ಪ್ರೇರಿತ: ಕಾಂಗ್ರೆಸ್ ಆರೋಪ
ಬ್ರಹ್ಮಾವರ: ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಆರೋಪಿಸಿ ಶುಕ್ರವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಿತು.

ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾಮಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಬ್ರಹ್ಮಾವರ ಹೆದ್ದಾರಿಯಿಂದ ಮೆರವಣಿಗೆ ನಡೆಸಿ, ಬಳಿಕ ಪೇಟೆ ಬಳಿ ಸಭೆ ನಡೆಸಿದರು.

ಕೆಲಕಾಲ ಹೆದ್ದಾರಿಯಲ್ಲಿ ನಿಂತು ತಮ್ಮ ಆಕ್ರೋಶ ಹೊರಹಾಕಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಉಳ್ಳಾಲ ಶಾಸಕ ಯು. ಟಿ. ಖಾದರ್ ಸರಕಾರದ ದಬ್ಬಾಳಿಕೆ, ಜನವಿರೋಧಿ ನೀತಿಯ ವಿರುದ್ಧದ ಪ್ರತಿಭಟನೆ ಇದಾಗಿದೆ. ಗಾಂಧಿ ಕುಟುಂಬ ಶೋಷಿತರ ಪರವಾಗಿ, ಅನ್ಯಾಯಕ್ಕೊಳಗಾದವರ ಪರವಾಗಿ ಹೋರಾಟ ನಡೆಸುತ್ತಿರುವ ಈ ಸಂದರ್ಭದಲ್ಲಿ ಜನರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನದ ಭಾಗವಾಗಿ ಸೋನಿಯಾ ಗಾಂಧಿಗೆ ನೋಟಿಸ್ ಮಾಡಿ ವಿಚಾರಣೆ ನಡೆಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಆಧಾರವಿಲ್ಲದೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಆದರೆ ಪಿ.ಎಸ್.ಐ ಹಗರಣದಲ್ಲಿ ಬಿಜೆಪಿ ಪಾಲಿದ್ದರೂ ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸಿಗರಿಗೆ ಮಾನಸಿಕ ಕಿರುಕುಳ ನೀಡಬೇಕು. ಅವರ ಸ್ಥೆರ್ಯ ಕಸಿಯಬೇಕು ಎಂಬ ದುರುದ್ದೇಶದಿಂದ ಕೆಟ್ಟ ರಾಜಕೀಯ ಮಾಡಲು ಬಿಜೆಪಿ ಹೊರಟಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಗಾಂಧಿ ಕುಟುಂಬದ ಮೇಲೆ ನೀವು ಎಷ್ಟೇ ದೌರ್ಜನ್ಯ ಎಸಗಿದರೂ ಖಂಡಿತವಾಗಿಯೂ ಸತ್ಯಕ್ಕೆ ಜಯ ಲಭಿಸುತ್ತದೆ ಎಂದು ಖಾದರ್ ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮತ್ತು ಅಭಯಚಂದ್ರ ಜೈನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ವೆರೋನಿಕಾ ಕರ್ನೇಲಿಯೊ, ಭಾಸ್ಕರ ರಾವ್ ಕಿದಿಯೂರು, ಉದ್ಯಾವರ ನಾಗೇಶ ಕುಮಾರ್, ಯತೀಶ್ ಶೆಟ್ಟಿ, ಕೀರ್ತಿ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!