ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 15
ಅಮೃತ ಪಾಲ್ ಗೆ ನ್ಯಾಯಾಂಗ ಬಂಧನ
ಬೆಂಗಳೂರು: ಎಸ್.ಐ ನೇಮಕಾತಿ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಎಡಿಜಿಪಿ ಅಮೃತ್ ಪಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಈ ಆದೇಶ ಹೊರಡಿಸಿದೆ.
ಜುಲೈ 4ರಂದು ಪಿಎಸ್.ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿ ಆಗಿದ್ದ ಅಮೃತ್ ಪಾಲ್ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿದ್ದರು. ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಕೋರ್ಟಿಗೆ ಹಾಜರುಪಡಿಸಲಾಗಿತ್ತು.
ಸದ್ಯ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ ನ್ಯಾಯಾಲಯ, 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.