Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಉಡುಪಿ: ಜಿಲ್ಲೆಯಲ್ಲಿ ಇಳಿಮುಖವಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ಬುಧವಾರ 149 ಮಂದಿಗೆ ಸೋಂಕು ವರದಿಯಾಗಿದೆ. ಕೇವಲ 88 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 940 ಸಕ್ರಿಯ ಪ್ರಕರಣಗಳಿವೆ. ಇಂದು ಯಾವುದೇ ಸಾವು ವರದಿಯಾಗಿಲ್ಲ.

ಇಂದು 2,380 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಆ ಪೈಕಿ 134 ಮಂದಿ ಮನೆ ಆರೈಕೆ ಹಾಗೂ 15 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋಂಕಿತರ ಪೈಕಿ ಉಡುಪಿಯ 67, ಕುಂದಾಪುರ 52, ಕಾರ್ಕಳ 30 ಮಂದಿ ಸೇರಿದ್ದಾರೆ ಎಂದು ಡಿಎಚ್.ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!