ಸುದ್ದಿಕಿರಣ ವರದಿ
ಗುರುವಾರ, ಜೂನ್ 16
ದಾಂತಿ ಸ್ಮಾರಕ ಪ್ರಶಸ್ತಿ ಪ್ರದಾನ
ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಮತ್ತು ದಿ| ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಸಮಿತಿ ವತಿಯಿಂದ ನೀಡಲಾಗುವ 2022ನೇ ಸಾಲಿನ ರಾಜ್ಯ ಮಟ್ಟದ ಪುರಸ್ಕಾರ ಲೇಖಕ ಜೋನಿ ಮರಿಯಭೂಮಿ ಅವರ ಸ್ವಚ್ಛಂದಾವರೆ ಕೃತಿಗೆ ಪ್ರದಾನ ಮಾಡಲಾಯಿತು.
ನಗರದ ಶೋಕಮಾತಾ ಜಗರ್ಜಿಯ ಡೋನ್ ಬೊಸ್ಕೊ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ಟಿವಿ ನಿರೂಪಕ ವಾಲ್ಟರ್ ನಂದಳಿಕೆ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ 25 ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ.
ಕಡಿಮೆಯಾಗುತ್ತಿರುವ ಓದಿನ ಹವ್ಯಾಸ
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಜೋನಿ ಮರಿಯಭೂಮಿ, ನೈಜ ಬರಹಗಾರರನ್ನು ಹುಡುಕಿ ಅವರ ಕೃತಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಶ್ಲಾಘನೀಯ. ಆ ಮೂಲಕ ಇನ್ನಷ್ಟು ಲೇಖಕರು ತಮ್ಮ ಕೃತಿಗಳನ್ನು ಪ್ರಕಟಿಸುವ ಮನಸ್ಸು ಮಾಡುತ್ತಾರೆ. ಇಂದು ಯುವ ಜನತೆಯಲ್ಲಿ ಓದುವ ಹವ್ಯಾಸ ಕಡಿಮೆಯಾಗಿದ್ದು, ಅದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನ ಸಾಗಬೇಕಾಗಿದೆ ಎಂದರು.
ಕಥೊಲಿಕ್ ಸಭಾ ಮಾಜಿ ಅಧ್ಯಕ್ಷ ಡಾ| ಜೆರಾಲ್ಡ್ ಪಿಂಟೊ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು.
ಇದೇ ವೇಳೆ ದಿ| ಡೆನಿಸ್ ಡಿ’ಸಿಲ್ವಾ ಸ್ಮಾರಕ ಲೇಖನ ಸ್ಪರ್ಧೆ ಬಹುಮಾನ ವಿತರಿಸಲಾಯಿತು. ಅಲ್ಫೋನ್ಸ್ ಡಿ’ಕೋಸ್ತಾ ಬಹುಮಾನಿತರ ವಿವರ ನೀಡಿದರು.
ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷೆ ಮೇರಿ ಡಿ’ಸೋಜಾ ಅಧ್ಯಕ್ಷತೆ ವಹಿಸಿದ್ದರು.
ಸಂಘಟನೆಯ ಆಧ್ಯಾತ್ಮಿಕ ನಿರ್ದೇಶಕ ವಂ| ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಕಟಪೂರ್ವ ಅಧ್ಯಕ್ಷ ರೋಬರ್ಟ್ ಮಿನೇಜಸ್, ಉಪಾಧ್ಯಕ್ಷ ರೊನಾಲ್ಡ್ ಡಿ’ಆಲ್ಮೇಡಾ, ಸಹಕಾರ್ಯದರ್ಶಿ ಒಲಿವಿಯಾ ಡಿಮೆಲ್ಲೊ, ಕೋಶಾಧಿಕಾರಿ ಜೆರಾಲ್ಡ್ ರಾಡ್ರಿಗಸ್, ಮಾನಸ ಸಂಸ್ಥೆ ಅಧ್ಯಕ್ಷ ಹೆನ್ರಿ ಮಿನೇಜಸ್, ಸಶಕ್ತ ಸಮುದಾಯ ಸೇವಾ ಟ್ರಸ್ಟ್ ಅಧ್ಯಕ್ಷ ವಾಲ್ಟರ್ ಸಿರಿಲ್ ಪಿಂಟೊ, ಮಾಜಿ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್, ಎಲ್ ರೊಯ್ ಕಿರಣ್ ಕ್ರಾಸ್ತಾ ಮತ್ತು ವಲೇರಿಯನ್ ಫೆರ್ನಾಂಡಿಸ್ ಮೊದಲಾದವರಿದ್ದರು.
ನಿಯೋಜಿತ ಅಧ್ಯಕ್ಷ ಸಂತೋಷ್ ಕರ್ನೇಲಿಯೊ ಸ್ವಾಗತಿಸಿ, ಕಾರ್ಯದರ್ಶಿ ಗ್ರೆಗರಿ ಪಿಕೆ ಡಿ’ಸೋಜಾ ವಂದಿಸಿದರು. ಕ್ಯಾರಲ್ ಆಳ್ವಾ ನಿರೂಪಿಸಿದರು.