Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಕೋವಿಡ್ ನಿರ್ವಹಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯ ಶ್ಲಾಘನೀಯ

ಕೋವಿಡ್ ನಿರ್ವಹಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯ ಶ್ಲಾಘನೀಯ

ಉಡುಪಿ: ಕೋವಿಡ್ ನಿರ್ವಹಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸೇವೆ ಮಹತ್ವದ್ದಾಗಿದೆ. ಪಕ್ಷ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು, ಜನಸೇವೆಯಲ್ಲಿ ತೊಡಗಿಕೊಂಡಿದ್ದರು. ಕೋವಿಡ್ ಜಾಗೃತಿ ಮೂಡಿಸುವ ಜೊತೆಗೆ ಆರ್ಥಿಕ ಹಾಗೂ ಅಗತ್ಯ ಸಹಾಯ ಮಾಡುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿರುವುದು ಪ್ರಶಂಸನೀಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ತಿಳಿಸಿದರು.

ಬುಧವಾರ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಕೊಡವೂರು ಕಲ್ಮತ್ ಮಸೀದಿ ಜಾಗ ಮರಳಿಸುವಂತೆ ಸರ್ಕಾರವನ್ನು ಕಾಂಗ್ರೆಸ್ ಆಗ್ರಹಿಸುತ್ತದೆ ಎಂದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ದೇಶದಲ್ಲಿಂದು ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸರ್ಕಾರದ ಆಡಳಿತ ವೈಖರಿ ವಿರುದ್ಧ ಮಾತನಾಡಿದವರಿಗೆ ದೇಶದ್ರೋಹದ ಪ್ರಕರಣ ದಾಖಲಿಸಿ ಧ್ವನಿ ಅಡಗಿಸುವ ಯತ್ನ ನಡೆಯುತ್ತಿದೆ ಎಂದರು.

ಮಾಜಿ ಶಾಸಕ ಗೋಪಾಲ ಪೂಜಾರಿ, ಮುಂಬರುವ ತಾ. ಪಂ. ಹಾಗೂ ಜಿ. ಪಂ. ಚುನಾವಣೆ ಬಗ್ಗೆ ಈಗಿಂದೀಗಲೇ ತಯಾರಿ ನಡೆಸಬೇಕಾಗಿದೆ. ಸರ್ಕಾರ ಕ್ಷೇತ್ರ ವಿಂಗಡನೆಯನ್ನು ತನ್ನ ಅನುಕೂಲಕ್ಕೆ ಬೇಕಾದಂತೆ ಮಾಡಿಕೊಳ್ಳುವ ತಯಾರಿ ನಡೆಸುತ್ತಿದೆ. ಈ ಬಗ್ಗೆ ಪಕ್ಷದ ವತಿಯಿಂದ ಅಹವಾಲನ್ನು ಸರ್ಕಾರಕ್ಕೆ ಮಂಡಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಲಾಕ್ ಡೌನ್ ಅವಧಿಯಲ್ಲಿ ನಿಧನರಾದ ಪಕ್ಷ ಮುಖಂಡರಿಗೆ ಅವರ ಪಕ್ಷ ಸೇವೆ ಸ್ಮರಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.

ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ರಾಜ್ಯ ಸಹ ಸಂಚಾಲಕಿಯಾಗಿ ನಿಯುಕ್ತಿಗೊಂಡ ರೋಶನಿ ಒಲಿವೆರಾ ಅವರನ್ನು ಅಭಿನಂದಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ಕುಶಲ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ವಂದಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!