Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಭಾಸ್ಕರಾನಂದಕುಮಾರ್ ಗೆ ಸನ್ಮಾನ

ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಭಾಸ್ಕರಾನಂದಕುಮಾರ್ ಗೆ ಸನ್ಮಾನ

ಸುದ್ದಿಕಿರಣ ವರದಿ
ಭಾನುವಾರ, ಜುಲೈ 10

ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಭಾಸ್ಕರಾನಂದಕುಮಾರ್ ಗೆ ಸನ್ಮಾನ
ಉಡುಪಿ: ಇಂಗ್ಲೆಂಡ್ ನ ಕರ ಶಸ್ತ್ರಚಿಕಿತ್ಸೆ ಸಂಘಟನೆಗಳ ಅಂತಾರಾಷ್ಟ್ರೀಯ ಒಕ್ಕೂಟದ ಪ್ರತಿಷ್ಠಿತ ‘ಪಯೊನೀರ್ ಇನ್ ಹ್ಯಾಂಡ್ ಸರ್ಜರಿ’ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಹಿರಿಯ ಮೂಳೆ ತಜ್ಞ ಡಾ. ಭಾಸ್ಕರಾನಂದ ಕುಮಾರ್ ಅವರನ್ನು ಯಕ್ಷಗಾನ ಕಲಾರಂಗ ಸಂಸ್ಥೆ ವತಿಯಿಂದ ಈಚೆಗೆ .ಪೇಜಾವರ ಮಠದ ಶ್ರೀರಾಮ ವಿಠಲ ಸಭಾಭವನದಲ್ಲಿ ನಡೆದ ಸಂಘದ 47ನೇ ವಾರ್ಷಿಕ ಮಹಾಸಭೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಲಾರಂಗ ಅಧ್ಯಕ್ಷ ಎಂ. ಗಂಗಾಧರ ರಾವ್ ಗೌರವಿಸಿದರು.

ಹಿರಿಯ ವೈದ್ಯ ಡಾ. ಪಿ.ಎಲ್.ಎನ್ ರಾವ್ ಅಭಿನಂದನಾ ಭಾಷಣ ಮಾಡಿದರು.

ಇದೇ ಸಂದರ್ಭದಲ್ಲಿ ಈಚೆಗೆ ಪಿ.ಎಚ್.ಡಿ ಪದವಿ ಪಡೆದ ಸಂಸ್ಥೆಯ ಸಕ್ರಿಯ ಸದಸ್ಯ ಹಾಗೂ ಮಣಿಪಾಲ ಕೆ.ಎಂ.ಸಿ ಫಿಸಿಯೋಥೆರಫಿ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಜೇಶ್ ನಾವುಡ ಅವರನ್ನು ಅಭಿನಂದಿಸಲಾಯಿತು.

ಸಂಸ್ಥೆಯ ದಾನಿಗಳಾದ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ರಿಜಿಸ್ಟ್ರಾರ್ ವಿದ್ಯಾವಂತ ಆಚಾರ್ಯ ಹಾಗೂ ಸಂಸ್ಥೆ ಸದಸ್ಯ ನಂದಳಿಕೆ ಸುಬ್ರಹ್ಮಣ್ಯ ಬೈಪಡಿತ್ತಾಯ ಅವರನ್ನು ಗೌರವಿಸಲಾಯಿತು.

ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆ, ಲೆಕ್ಕಪರಿಶೋಧಕರ ನೇಮಕ ಬಳಿಕ ಕಾರ್ಯಕಾರಿ ಸಮಿತಿ ಮತ್ತು ಸಲಹಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.ಆರಂಭದಲ್ಲಿ ವರದಿ ವರ್ಷದಲ್ಲಿ ಅಗಲಿದ ಸಂಸ್ಥೆಯ ಸದಸ್ಯರು ಹಾಗೂ ಕಲಾವಿದರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಉಪಾಧ್ಯಕ್ಷ ಎಸ್. ವಿ. ಭಟ್ ನುಡಿನಮನ ಸಲ್ಲಿಸಿದರು.

ಉಪಾಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ ಮತ್ತು ವಿ. ಜಿ. ಶೆಟ್ಟಿ ಹಾಗೂ ಕೋಶಾಧಿಕಾರಿ ಕೆ. ಮನೋಹರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರೊ. ಕೆ. ಸದಾಶಿವ ರಾವ್, ಪ್ರೊ. ನಾರಾಯಣ ಎಂ. ಹೆಗಡೆ, ಮಾಜಿ‌ ಅಧ್ಯಕ್ಷ ಡಾl ತಲ್ಲೂರು ಶಿವರಾಮ ಶೆಟ್ಡಿ ಇದ್ದರು.

ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು. ಎಚ್. ಎನ್. ಶೃಂಗೇಶ್ವರ ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!