Monday, August 15, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ನಾಡನುಡಿಯಲ್ಲಿ ರಾಜರ್ಷಿ ಪ್ರಮಾಣವಚನ

ನಾಡನುಡಿಯಲ್ಲಿ ರಾಜರ್ಷಿ ಪ್ರಮಾಣವಚನ

ಸುದ್ದಿಕಿರಣ ವರದಿ
ಗುರುವಾರ, ಜುಲೈ 21

ನಾಡನುಡಿಯಲ್ಲಿ ರಾಜರ್ಷಿ ಪ್ರಮಾಣವಚನ
ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ| ವಿರೇಂದ್ರ ಹೆಗ್ಗಡೆ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಕನ್ನಡದಲ್ಲಿಯೇ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಕನ್ನಡ ಪ್ರೇಮವನ್ನು ಮೆರೆದು ಡಾ| ಹೆಗ್ಗಡೆ ಸರ್ವತ್ರ ಪ್ರಶಂಸೆಗೊಳಗಾಗಿದ್ದಾರೆ.

ರಾಜ್ಯಸಭೆ ಸ್ಪೀಕರ್ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ರಾಜ್ಯಸಭೆ ನಾಮನಿರ್ದೇಶಿತ ಸದಸ್ಯರಾಗಿ ಡಾ| ವೀರೇಂದ್ರ ಹೆಗ್ಗಡೆ ಪ್ರಮಾಣವಚನ ಸ್ವೀಕರಿಸಿದರು.

ಕರಾವಳಿ ಕರ್ನಾಟಕ ಭಾಗದಿಂದ ಪ್ರಸ್ತುತ ರಾಜ್ಯಸಭೆಗೆ ಆಯ್ಕೆಯಾಗಿರುವ ಡಾ| ಹೆಗ್ಗಡೆ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇದೀಗ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿರುವುದು ರಾಜ್ಯ ಹಾಗೂ ಜನತೆಗೆ ಹೆಮ್ಮೆಪಡುವ ಸಂಗತಿಯಾಗಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!