Saturday, August 13, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ಸುದ್ದಿಕಿರಣ ವರದಿ
ಗುರುವಾರ, ಜುಲೈ 21

ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ
ನವದೆಹಲಿ: ನೂತನ ರಾಷ್ಟ್ರಪತಿ ಆಯ್ಕೆ ಮತ ಎಣಿಕೆಯಲ್ಲಿ ಎನ್.ಡಿ.ಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ದಾಖಲಿಸಿದ್ದಾರೆ. ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಭಾರತದ ಮಹೋನ್ನತ ಹುದ್ದೆ ಅಲಂಕರಿಸಿರುವ ಬುಡಕಟ್ಟು ಸಮುದಾಯದ ಪ್ರಥಮ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ದ್ರೌಪದಿ ಮುರ್ಮು ವಿಜೇತರಾಗಿರುವ ಸುದ್ದಿ ಹೊರಹೊಮ್ಮುತ್ತಿರುವಂತೆಯೇ ದೇಶದ ವಿವಿಧ ಕಡೆಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಅವರ ತವರು ರಾಜ್ಯ ಒಡಿಶಾದಲ್ಲಿ ಇಂದು ಬೆಳಿಗ್ಗೆಯಿಂದಲೇ ಜನರು ಕುಣಿದು ಕುಪ್ಪಳಿಸಿ ಸಂಭ್ರಮಿಸುತ್ತಿದ್ದಾರೆ.

ಮುರ್ಮು ಅವರನ್ನು ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ದೇಶದ ಎರಡನೇ ಮಹಿಳೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!