ಸುದ್ದಿಕಿರಣ ವರದಿ
ಭಾನುವಾರ, ಜುಲೈ 10
ರಾಷ್ಟ್ರಪತಿ ಸ್ಥಾನ ಅಭ್ಯರ್ಥಿ ಮುರ್ಮು ಬೆಂಗಳೂರು ಭೇಟಿ
ಬೆಂಗಳೂರು: ರಾಷ್ಟ್ರಪತಿ ಸ್ಥಾನದ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಭಾನುವಾರ ಬೆಂಗಳೂರಿಗೆ ಆಗಮಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ ಹಾಗೂ ಕಿಶನ್ ರೆಡ್ಡಿ, ಸಚಿವ ಶ್ರೀರಾಮುಲು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲಾದವರಿದ್ದರು.
ಇದೇ ಸಂದರ್ಭದಲ್ಲಿ ಮುರ್ಮು ಅವರು ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿ ಮತ ಯಾಚಿಸಿದರು.