Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ಮಾಜಿ ಸಂಸದ ಜಿ. ಮಾದೇಗೌಡ ಇನ್ನಿಲ್ಲ

ಮಾಜಿ ಸಂಸದ ಜಿ. ಮಾದೇಗೌಡ ಇನ್ನಿಲ್ಲ

ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ, ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಶನಿವಾರ ಭಾರತೀನಗರದ ಜಿ. ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊನೆಯುಡಿರೆಳೆದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದ ಮಾದೇಗೌಡ, 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಕಿರುಗಾವಲು ಕ್ಷೇತ್ರ ಮಳವಳ್ಳಿ ಕ್ಷೇತ್ರದೊಂದಿಗೆ ವಿಲೀನವಾದ ಬಳಿಕ ಮಂಡ್ಯಕ್ಕೆ ಬಂದರು.

1989 ಮತ್ತು 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು.

1980- 83ರ ವರೆಗೆ ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!