Thursday, December 2, 2021
Home ಸಮಾಚಾರ ಜಿಲ್ಲಾ ಸುದ್ದಿ ಆ. 6ರಂದು ನೂತನ ಸಚಿವರಿಗೆ ಅಭಿನಂದನೆ

ಆ. 6ರಂದು ನೂತನ ಸಚಿವರಿಗೆ ಅಭಿನಂದನೆ

ಆ. 6ರಂದು ನೂತನ ಸಚಿವರಿಗೆ ಅಭಿನಂದನೆ

(ಸುದ್ದಿಕಿರಣ ವರದಿ)
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಮತ್ತು ವಿ. ಸುನಿಲ್ ಕುಮಾರ್ ಅಭಿನಂದನಾ ಕಾರ್ಯಕ್ರಮ ಆ. 6ರ ಅಪರಾಹ್ನ 3.30 ಗಂಟೆಗೆ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಮಾರಂಭದಲ್ಲಿ ಪಕ್ಷ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಗಳ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸುವರು.

ಅಭಿನಂದನಾ ಸಮಾರಂಭದ ಪೂರ್ವಭಾವಿಯಾಗಿ ನೂತನ ಸಚಿವರನ್ನು ಅಪರಾಹ್ನ 2.30ಕ್ಕೆ ಹಿರಿಯಡ್ಕ ಪೇಟೆಯಲ್ಲಿ ಕಾಪು ಮಂಡಲ ವತಿಯಿಂದ ಹಾಗೂ 2.45ಕ್ಕೆ ಪರ್ಕಳ ಪೇಟೆಯಲ್ಲಿ ಉಡುಪಿ ನಗರ ಮಂಡಲ ವತಿಯಿಂದ ಸ್ವಾಗತಿಸಲಾಗುವುದು.

ಸಚಿವ ತ್ರಯರು ಸಂಜೆ 5.30ಕ್ಕೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವರು. 6 ಗಂಟೆಗೆ ಬಿಜೆಪಿ ಜಿಲ್ಲಾ ಕಚೇರಿಗೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆ ತಿಳಿಸಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!