ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ
(ಸುದ್ದಿಕಿರಣ ವರದಿ)
ಉಡುಪಿ: ಕೇಂದ್ರ ಸಚಿವೆಯಾಗಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.
ಬುಧವಾರ ಜನಾಶೀರ್ವಾದ ಯಾತ್ರೆ ಮೂಲಕ ಜಿಲ್ಲೆಗಾಗಮಿಸಿದ ಸಚಿವೆ ಶೋಭಾ ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಚಿವೆ ಕರಂದ್ಲಾಜೆ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್ ಮತ್ತು ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮೊದಲಾದವರಿದ್ದರು.