ಸುದ್ದಿಕಿರಣ ವರದಿ
ಶನಿವಾರ, ಮೇ 14
ಕೇಂದ್ರ ವಿತ್ತ ಮಂತ್ರಿ ಕೃಷ್ಣಮಠ, ಕೊಲ್ಲೂರು ಭೇಟಿ
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭಾರತ ಸರಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಶನಿವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್, ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಪರ್ಯಾಯ ಕೃಷ್ಣಾಪುರ ಮಠದ ದಿವಾನ ವರದರಾಜ ಭಟ್, ಪೇಜಾವರ ಮಠ ದಿವಾನ ರಘುರಾಮ ಆಚಾರ್ಯ, ವಾಸುದೇವ ಭಟ್ ಪೆರಂಪಳ್ಳಿ ಮೊದಲಾದವರಿದ್ದರು.
ಬಳಿಕ ಕೊಲ್ಲೂರಿಗೆ ತೆರಳಿ ಶ್ರೀ ಮೂಕಾಂಬಿಕಾ ದೇವಿ ದರ್ಶನ ಪಡೆದರು