ಸುದ್ದಿಕಿರಣ ವರದಿ
ಬುಧವಾರ, ಜುಲೈ 20
ಆ್ಯಂಬುಲೆನ್ಸ್ ಅವಘಡ: ಒಂದೇ ಕುಟುಂಬದ ನಾಲ್ವರ ದುರ್ಮರಣ
ಬೈಂದೂರು: ಹೊನ್ನಾವರದಿಂದ ಉಡುಪಿ ಜಿಲ್ಲೆಗೆ ರೋಗಿಗಳನ್ನು ಚಿಕಿತ್ಸೆಗೆಂದು ಕರೆತರುತ್ತಿದ್ದ ಆ್ಯಂಬುಲೆನ್ಸ್, ಇಲ್ಲಿನ ಶಿರೂರು ಟೋಲ್ ಗೇಟ್ ಬಳಿ ಬುಧವಾರ ಭೀಕರ ಅಪಘಾತಕ್ಕೀಡಾಗಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಗಜಾನನ, ಗೀತಾ, ಲೋಕೇಶ್ ಮತ್ತು ಮಂಜುನಾಥ ಎಂದು ತಿಳಿದುಬಂದಿದೆ.
ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುತ್ತಿದ್ದರು ಎನ್ನಲಾಗಿದ್ದು, ಅತಿ ವೇಗ ಘಟನೆಗೆ ಕಾರಣ ಎನ್ನಲಾಗಿದೆ.
ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಆ್ಯಂಬುಲೆನ್ಸ್ ನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು.