ಸುದ್ದಿಕಿರಣ ವರದಿ
ಭಾನುವಾರ, ಜೂನ್ 12
ಉಚಿತ ನೋಟ್ ಪುಸ್ತಕ ವಿತರಣೆ
ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ಇಲ್ಲಿನ ಕ್ರಿಶ್ಚಿಯನ್ ಹೈಸ್ಕೂಲ್ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಈಚೆಗೆ ನಡೆಯಿತು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸೊಸೈಟಿ ಪ್ರಧಾನ ವ್ಯವಸ್ಥಾಪಕ ರಾಜೇಶ್ ಶೇರಿಗಾರ್, ಶಾಲಾ ಮುಖ್ಯೋಪಾಧ್ಯಾಯಿನಿ ರೇಖಾ ಕೆ. ಎಂ. ಮೊದಲಾದವರಿದ್ದರು.