Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ: ಮೂವರ ಬಲಿ

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ: ಮೂವರ ಬಲಿ

ಸುದ್ದಿಕಿರಣ ವರದಿ
ಸೋಮವಾರ, ಮಾರ್ಚ್ 21

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ: ಮೂವರ ಬಲಿ
ಕಾಪು: ಇಲ್ಲಿನ ಮಲ್ಲಾರು ಸಲಫಿ ಮಸೀದಿ ಬಳಿಯ ಗುಜರಿ ಅಂಗಡಿಯಲ್ಲಿ ಸೋಮವಾರ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರು ಸಾವನ್ನಪ್ಪಿದ್ದಾರೆ.

ಗುಜರಿ ಅಂಗಡಿಗೆ ಸಿಲಿಂಡರ್ ತರಲಾಗಿತ್ತು. ಆಕಸ್ಮಿಕವಾಗಿ ಅದಕ್ಕೆ ಬೆಂಕಿ ತಗುಲಿದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನಪ್ಪಿ, ಮೂವರು ಗಂಭೀರ ಗಾಯಗೊಂಡಿದ್ದು, ಆ ಪೈಕಿ ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ರಜಾಕ್ ಮಲ್ಲಾರ್, ರಜಬ್ ಚಂದ್ರನಗರ ಮತ್ತು ನಿಯಾಝ್ ಎಂದು ಗುರುತಿಸಲಾಗಿದೆ.

ಗುಜರಿ ಅಂಗಡಿಯಲ್ಲಿರಿಸಲಾಗಿದ್ದ ಹಳೆಯ ಫ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿಯಾಗಿವೆ.

ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಉಡುಪಿ ಅಗ್ನಿಶಾಮಕ ದಳ ಹಾಗೂ ಐಎಸ್.ಪಿ.ಆರ್.ಎಲ್.ನ ಅಗ್ನಿಶಾಮಕ ದಳ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದು ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ಅಕ್ಕಪಕ್ಕದ ಮನೆಗಳಿಗೆ ಹಬ್ಬುವುದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಸ್ಥಳೀಯ ಶಾಸಕ ಲಾಲಾಜಿ ಮೆಂಡನ್ ಘಟನೆಗೆ ಖೇದ ವ್ಯಕ್ತಪಡಿಸಿದ್ದಾರೆ.

.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!