Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ರಾಜ್ಯದ 19ನೇ ರಾಜ್ಯಪಾಲರಾಗಿ ಗೆಹ್ಲೊಟ್ ಪ್ರಮಾಣ ವಚನ

ರಾಜ್ಯದ 19ನೇ ರಾಜ್ಯಪಾಲರಾಗಿ ಗೆಹ್ಲೊಟ್ ಪ್ರಮಾಣ ವಚನ

ಬೆಂಗಳೂರು, ಜು. 11 (ಸುದ್ದಿಕಿರಣ ವರದಿ): ಕರ್ನಾಟಕ ರಾಜ್ಯದ 19 ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಹೈಕೋರ್ಟ್ ಸಿಜೆ ಎ. ಎಸ್. ಓಕಾ ಪ್ರತಿಜ್ಞಾವಿಧಿ ಬೋಧಿಸಿದರು.

ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ. ಸುಧಾಕರ್, ಆರ್. ಅಶೋಕ್, ಸಂಸದೆ ಸುಮಲತಾ ಸೇರಿದಂತೆ ಅನೇಕರು ಭಾಗವಹಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!