Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಅಮರನಾಥ: ಉಡುಪಿ ಮಂದಿ ಸಿಲುಕಿದ್ದಲ್ಲಿ ಮಾಹಿತಿ ನೀಡಿ

ಅಮರನಾಥ: ಉಡುಪಿ ಮಂದಿ ಸಿಲುಕಿದ್ದಲ್ಲಿ ಮಾಹಿತಿ ನೀಡಿ

ಸುದ್ದಿಕಿರಣ ವರದಿ
ಶನಿವಾರ, ಜುಲೈ 9

ಅಮರನಾಥ: ಉಡುಪಿ ಮಂದಿ ಸಿಲುಕಿದ್ದಲ್ಲಿ ಮಾಹಿತಿ ನೀಡಿ
ಉಡುಪಿ: ಅಮರನಾಥ ಮೇಘಸ್ಪೋಟದಿಂದಾಗಿ ಸಿಲುಕಿಕೊಂಡಿರುವ ಜಿಲ್ಲೆಯ ಪ್ರವಾಸಿಗರು ಇದ್ದಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.

ಯಾತ್ರಾಸ್ಥಳವಾದ ಅಮರನಾಥ ಕ್ಷೇತ್ರದ ಪ್ರದೇಶದಲ್ಲಿ ಶುಕ್ರವಾರ ಸಂಜೆ 5.30ರ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅದರಿಂದ ಅಮರನಾಥ ಯಾತ್ರೆ ಮಾರ್ಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿ ಭಾರೀ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ದಿಢೀರನೇ ಜೋರಾಗಿ ನೀರು ಹರಿದು ಬಂದಿದ್ದರಿಂದ ಯಾತ್ರೆ ಮಾರ್ಗದಲ್ಲಿ ಯಾತ್ರಾರ್ಥಿಗಳು ತಂಗಲು ನಿರ್ಮಿಸಿದ್ದ ಟೆಂಟ್ ಗಳು ಪ್ರವಾಹದ ನೀರಿನ ಹೊಡೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿವೆ. ಹಲವು ಮಂದಿ ಯಾತ್ರಾರ್ಥಿಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆಂದು ಸುದ್ದಿ ಇದೆ. ಮೇಘಸ್ಫೋಟದ ಅನಾಹುತ ಬಳಿಕ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಉಡುಪಿ ಜಿಲ್ಲೆಯಿಂದ ಅಮರನಾಥ ಕ್ಷೇತ್ರ ಯಾತ್ರೆ ಕೈಗೊಂಡು, ಮೇಘಸ್ಪೋಟದ ಪ್ರವಾಹಕ್ಕೆ ಸಿಲುಕಿರುವ ಅಥವಾ ಸುರಕ್ಷಿತವಾಗಿರುವ ಯಾತ್ರಾರ್ಥಿಗಳು ಯಾರಾದರೂ ಇದ್ದಲ್ಲಿ ಅವರ ಸಂಬಂಧಿಕರು ಕೂಡಲೇ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ 1077 (0820-2574802) ಕರೆ ಮಾಡಿ ಸಂಬಂಧಪಟ್ಟ ಯಾತ್ರಾರ್ಥಿಗಳ ವಿವರ, ಮಾಹಿತಿಯನ್ನು ನೀಡುವಂತೆ ಡಿಸಿ ಕೋರಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!