ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನು ಸ್ವಾಗತಾರ್ಹ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂ ಗೋವು ದತ್ತು ಅಭಿಯಾನ ಪ್ರಮುಖ ಯಶಪಾಲ ಸುವರ್ಣ ತಿಳಿಸಿದ್ದಾರೆ.
ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ಪ್ರಧಾನ ಪಾತ್ರವಿದೆ. ಗೋವಿಗೆ ಮಾತೆಯ ಸ್ಥಾನ ಕಲ್ಪಿಸಲಾಗಿದೆ. ಗೋಮಾತೆಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ.
ಗೋ ಹತ್ಯೆ ನಿಷೇಧದ ಜೊತೆ ಜೊತೆಗೇ ಪ್ರತಿಯೊಬ್ಬರೂ ಗೋವುಗಳನ್ನು ಸಾಕಲು ಮುಂದಾಗಬೇಕು. ಅದು ಸಾಧ್ಯವಾಗದಿದ್ದಲ್ಲಿ ಗೋಶಾಲೆಗಳಲ್ಲಿರುವ ಗೋವುಗಳನ್ನು ದತ್ತು ಪಡೆಯುವ ಮೂಲಕ ಗೋ ರಕ್ಷಣೆಗೆ ಕೈಜೋಡಿಸಬೇಕಾಗಿದೆ ಎಂದು ಯಶಪಾಲ್ ತಿಳಿಸಿದ್ದಾರೆ