ಉಡುಪಿ: ಪೇಜಾವರ ಮಠದ ಗೋವರ್ಧನಗಿರಿ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ನೀಲಾವರ ಗೋಶಾಲೆಯ ಗವ್ಯ ಔಷಧೀಯ ಉತ್ಪನ್ನಗಳ ಪ್ರಯೋಗಾಲಯ ಅಭಿವೃದ್ಧಿಗೆ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ 40 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಈ ಕುರಿತು ಗೋಶಾಲೆಯ ರೂವಾರಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹರ್ಷ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ