Wednesday, August 10, 2022
Home ಸಮಾಚಾರ ರಾಜ್ಯ ವಾರ್ತೆ ಪೇಜಾವರ ಮಠಕ್ಕೆ ಗೋವಾ ರಾಜ್ಯಪಾಲ ಭೇಟಿ

ಪೇಜಾವರ ಮಠಕ್ಕೆ ಗೋವಾ ರಾಜ್ಯಪಾಲ ಭೇಟಿ

ಸುದ್ದಿಕಿರಣ ವರದಿ
ಶುಕ್ರವಾರ, ಮಾರ್ಚ್ 18

ಪೇಜಾವರ ಮಠಕ್ಕೆ ಗೋವಾ ರಾಜ್ಯಪಾಲ ಭೇಟಿ
ಉಡುಪಿ: ಶುಕ್ರವಾರ ಉಡುಪಿಗಾಗಮಿಸಿದ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಶ್ರೀಕೃಷ್ಣ ದರ್ಶನ ಬಳಿಕ ಪೇಜಾವರ ಮಠಕ್ಕೆ ಆಗಮಿಸಿದರು.

ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿಗಳಾದ ವಿಷ್ಣುಮೂರ್ತಿ ಆಚಾರ್ಯ ಮತ್ತು ಕೃಷ್ಣ ಭಟ್ ಹಾಗೂ ಶ್ರೀಗಳ ಶಾಸ್ತ್ರ ವಿದ್ಯಾರ್ಥಿಗಳು ಮಂತ್ರಘೋಷದೊಂದಿಗೆ ಅವರನ್ನು ಬರಮಾಡಿಕೊಂಡರು.

ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪಾದುಕೆಗಳಿಗೆ ಪುಷ್ಪ ಅರ್ಪಿಸಿದ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.

ಶ್ರೀಗಳು ರಾಜ್ಯಪಾಲ ದಂಪತಿಯನ್ನು ಶಾಲು ಸ್ಮರಣಿಕೆ ದೇವರ ಗಂಧಪ್ರಸಾದ ಹಾಗೂ ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ವಾಸುದೇವ ಭಟ್ ಪೆರಂಪಳ್ಳಿ ಅವರು ಕೃಷ್ಣಮಠ, ಅಷ್ಟಮಠಗಳ ಚರಿತ್ರೆ ಹಾಗೂ ಅವುಗಳ ಕಾರ್ಯನಿರ್ವಹಣೆ, ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!