Wednesday, August 10, 2022
Home ಸಮಾಚಾರ ರಾಜ್ಯ ವಾರ್ತೆ ಬಿಆರ್.ಎಸ್. ಆಸ್ಪತ್ರೆ ಸರ್ಕಾರದ ಸುಪರ್ದಿಗೆ

ಬಿಆರ್.ಎಸ್. ಆಸ್ಪತ್ರೆ ಸರ್ಕಾರದ ಸುಪರ್ದಿಗೆ

ಸುದ್ದಿಕಿರಣ ವರದಿ
ಗುರುವಾರ, ಮೇ 5

ಬಿಆರ್.ಎಸ್. ಆಸ್ಪತ್ರೆ ಸರ್ಕಾರದ ಸುಪರ್ದಿಗೆ
ಬೆಂಗಳೂರು: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬಿ.ಆರ್.ಎಸ್. ಆಸ್ಪತ್ರೆ) ಸರ್ಕಾರ ತನ್ನ ವಶಕ್ಕೆ ಪಡೆದಿದೆ. ಆ ಕುರಿತು ಗುರುವಾರ ಅಧಿಕೃತ ಆದೇಶ ಹೊರಡಿಸಿದೆ.
ಸಚಿವ ಸಂಪುಟ ಸಭೆಯ ನಿರ್ಣಯದಂತೆ ಆಸ್ಪತ್ರೆ ನಿರ್ವಹಣೆಯನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಆಸ್ಪತ್ರೆ ಕಟ್ಟಡದ ಸಂಪೂರ್ಣ ನಿರ್ವಹಣೆ ಹಾಗೂ ಇತರ ಜವಾಬ್ದಾರಿಗಳನ್ನು ಸರ್ಕಾರ ವಹಿಸಿಕೊಂಡಿದೆ. ಈ ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ ರೂ. 7 ಕೋಟಿ ಹಾಗೂ ಅವಶ್ಯವಿರುವ ಮಾನವ ಸಂಪನ್ಮೂಲಗಳಿಗೆ ಅವರ್ತಕ ವೆಚ್ಚವಾಗಿ ವಾರ್ಷಿಕ 2.83 ಕೋಟಿ ಸೇರಿದಂತೆ ಒಟ್ಟು 9.83 ಕೋ. ರೂ. ಅನುದಾನವನ್ನು ರಾಜ್ಯ ವಲಯದಿಂದ ಭರಿಸುವುದು ಹಾಗೂ 200 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅವಶ್ಯವಿರುವ ಹುದ್ದೆಗಳನ್ನು ಸರ್ಕಾರದ ವತಿಯಿಂದ ಭರ್ತಿ ಮಾಡುವ ಬಗ್ಗೆ ಸರ್ಕಾರ ಸಮ್ಮತಿ ನೀಡಿ ಆದೇಶಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನಿನಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 400 ಹಾಸಿಗೆಗಳ ಸೆಂಟರ್ ಆಫ್ ಎಕ್ಸಲೆನ್ಸ್ ಆಸ್ಪತ್ರೆ ಹಾಗೂ ಆರೋಗ್ಯ ಸೌಲಭ್ಯಗಳನ್ನೊಳಗೊಂಡ ಕೇಂದ್ರ ನಿರ್ವಹಿಸಲು ಮೆ| ಬಿ.ಆರ್.ಎಸ್. ಹೆಲ್ತ್ ರಿಸರ್ಚ್ ಇನ್ ಸ್ಟಿಟ್ಯೂಟ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಅವರಿಗೆ 30 ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಕೆಲವೊಂದು ಷರತ್ತುಗಳಿಗೊಳಪಟ್ಟು ಈ ಹಿಂದಿನ ಕಾಂಗ್ರೆಸ್ ಸರ್ಕಾರ ಅನುಮೋದನೆ ನೀಡಿತ್ತು.

ಶಾಸಕ ಕೆ ರಘುಪತಿ ಭಟ್ ಅವರು ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ವಹಣೆ ಸರ್ಕಾರದ ಸುಪರ್ದಿಗೆ ಪಡೆಯುವಂತೆ ಇಲಾಖೆ ಮಟ್ಟದಲ್ಲಿ ನಿರಂತರ ಪ್ರಯತ್ನಿಸಿ ವಿಧಾನಸಭಾಧಿವೇಶನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿ ಒತ್ತಾಯಿಸಿದ್ದರು.

20224 ಮಾ. 30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಆಸ್ಪತ್ರೆಯ ನಿರ್ವಹಣೆ ಸರ್ಕಾರ ವಹಿಸಿಕೊಳ್ಳುವ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!