Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ

ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ

ಸುದ್ದಿಕಿರಣ ವರದಿ
ಮಂಗಳವಾರ, ಜೂನ್ 14

ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ
ಕುಂದಾಪುರ: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಉತ್ತರ ಪತ್ರಿಕೆ ಮರು ಮೌಲ್ಯಮಾಪನದಲ್ಲಿ ಇಲ್ಲಿನ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅನಿರುದ್ಧ ಎಸ್. ಹತ್ವಾರ್ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾನೆ.

ಅಂತೆಯೇ ಆದಿತ್ಯ ಎಂ. 623 ಅಂಕದೊಂದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಮತ್ತು ಶಾನ್ವಿನ್ ರೋಯ್ಸ್ ಪಿರೇರಾ 620 ಅಂಕ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಈ ಹಿಂದೆ ಅನುಕ್ರಮವಾಗಿ 622, 621 ಮತ್ತು 616 ಅಂಕ ಬಂದಿತ್ತು ಎಂದು ಸಂಸ್ಥೆ ಪ್ರಾಂಶುಪಾಲೆ ಚಿಂತನಾ ರಾಜೇಶ್ ತಿಳಿಸಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ, ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅಭಿನಂದಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!