Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಪುತ್ತಿಗೆಶ್ರೀಗೆ ಅದ್ದೂರಿ ಸ್ವಾಗತ

ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಪುತ್ತಿಗೆಶ್ರೀಗೆ ಅದ್ದೂರಿ ಸ್ವಾಗತ

ಸುದ್ದಿಕಿರಣ ವರದಿ
ಬುಧವಾರ, ಜುಲೈ 27

ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಪುತ್ತಿಗೆಶ್ರೀಗೆ ಅದ್ದೂರಿ ಸ್ವಾಗತ
ಉಡುಪಿ: ಅಮೆರಿಕಾದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಭಕ್ತರ ಅಪೇಕ್ಷೆ ಮೇರೆಗೆ ತಮ್ಮ 49ನೇ ಚಾತುರ್ಮಾಸ್ಯ ವ್ರತ ದೀಕ್ಷೆ ಕೈಗೊಳ್ಳಲು ಸ್ಯಾನ್ ಫ್ರಾನ್ಸಿಸ್ಕೋ ಮಹಾನಗರಕ್ಕೆ ಆಗಮಿಸಿದ ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರಿಗೆ ಭವ್ಯ ಸ್ವಾಗತ ಕೋರಲಾಯಿತು.

ಶ್ರೀಪಾದರು ಈ ಬಾರಿಯ ಚಾತುರ್ಮಾಸ್ಯ ವ್ರತವನ್ನು ಸ್ಯಾನ್ ಹೋಸೆಯಲ್ಲಿರುವ ಶ್ರೀಮಠದ ಶಾಖೆ ಶ್ರೀಕೃಷ್ಣ ವೃಂದಾವನದಲ್ಲಿ ಕೈಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಅನೇಕ ಸಾಂಸ್ಕೃತಿಕ, ಧಾರ್ಮಿಕ, ಜ್ಞಾನ ಕಾರ್ಯಗಳು ಸಂಪನ್ನಗೊಳ್ಳಲಿವೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!