Wednesday, August 10, 2022
Home ಸಮಾಚಾರ ಜಿಲ್ಲಾ ಸುದ್ದಿ ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ಸುದ್ದಿಕಿರಣ ವರದಿ
ಶನಿವಾರ, ಆಗಸ್ಟ್ 6

ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ
ಉಡುಪಿ: ಪದ್ಮಶಾಲಿ ಶೆಟ್ಟಿಗಾರ ಸಮಾಜದ ಕುಲ ಕಸುಬಾದ ಕೈಮಗ್ಗ ನೇಕಾರಿಕೆಯನ್ನು ಪುನರುಜ್ಜೀವನಗೊಳಿಸಲು ಕಂಕಣಬದ್ಧವಾದ ಪದ್ಮಶಾಲಿ ನೇಕಾರರ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7ರಂದು ಕಲ್ಯಾಣಪುರ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಉಡುಪಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ನಡೆಯಲಿದೆ.

ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಪದ್ಮಶಾಲಿ ನೇಕಾರರ ಪ್ರತಿಷ್ಠಾನ ಅಧ್ಯಕ್ಷ ರತ್ನಾಕರ ಇಂದ್ರಾಳಿ, ಬೆಳಗ್ಗೆ 9 ಗಂಟೆಗೆ 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದ ನಡೆಯಲಿದ್ದು, ಶಿಕ್ಷಣ ತಜ್ಞರಾದ ನಾಗರಾಜ ಕಟೀಲ್, ದಿನೇಶ್ ಶೆಟ್ಟಿಗಾರ್ ಪರ್ಕಳ ಮತ್ತು ಸದಾಶಿವ ಗೋಳಿಜೋರ ಸಂಪನ್ಮೂಲವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಜೇಸಿಐ ಇಂಡಿಯಾ ತರಬೇತುದಾರ ಶಿವಾನಂದ ಶೆಟ್ಟಿಗಾರ್ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಕಲ್ಯಾಣಪುರ ಶ್ರೀ ಆದಿಶಕ್ತಿ ಬ್ರಹ್ಮಲಿಂಗ ವೀರಭದ್ರ ದೇವಸ್ಥಾನದ ಪ್ರಧಾನ ಮೊಕ್ತೇಸರ ಜ್ಯೋತಿಪ್ರಸಾದ್ ಶೆಟ್ಟಿಗಾರ್ ಹಾಗೂ ದೇವಸ್ಥಾನದ ಮಹಿಳಾ ವೇದಿಕೆ ಅಧ್ಯಕ್ಷೆ ಶೋಭಾ ಜ್ಯೋತಿಪ್ರಸಾದ್ ಶೆಟ್ಟಿಗಾರ್ ಉದ್ಘಾಟಿಸುವರು. ಉಡುಪಿ ಜಿ.ಪಂ. ಸಿಇಓ ಪ್ರಸನ್ನ ಎಚ್., ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಉಡುಪಿ ನಗರಸಭಾಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿ ಮಂಜು ಕೊಳ, ನಗರಸಭೆ ಸದಸ್ಯೆ ಮಂಜುಳಾ ವಿ. ನಾಯಕ್, ನಾಮನಿರ್ದೇಶಿತ ಸದಸ್ಯ ದಿನೇಶ್ ಪೈ, ಕಲ್ಯಾಣಪುರ ಗ್ರಾ.ಪಂ. ಅಧ್ಯಕ್ಷ ಕೃಷ್ಣ ದೇವಾಡಿಗ, ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಕಾರ್ಯಾಧ್ಯಕ್ಷ ರಘು ಎಸ್. ಶೆಟ್ಟಿಗಾರ್ ಪಾಲ್ಗೊಳ್ಳಲಿದ್ದಾರೆ.

ಹಿರಿಯ ನೇಕಾರರು, ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ, ಪ್ರತಿಭಾ ಪುರಸ್ಕಾರ ಪ್ರದಾನ ನಡೆಯಲಿದೆ. ಉಡುಪಿ ಜಿಲ್ಲೆಯಲ್ಲಿ ನೂರು ಮಂದಿ ನೇಕಾರರನ್ನು ಕೈಮಗ್ಗ ವೃತ್ತಿಗೆ ಕರೆತರುವ ಸಂಕಲ್ಪ, ಪ್ರತಿಜ್ಞಾ ಸ್ವೀಕಾರ ಮಾಡಲಾಗುವುದು ಎಂದು ರತ್ನಾಕರ ಇಂದ್ರಾಳಿ ತಿಳಿಸಿದರು.

ನಗರಸಭೆ ಸದಸ್ಯ ಮಂಜುನಾಥ ಮಣಿಪಾಲ, ಸಂಸ್ಥೆ ಪ್ರಧಾನ ಕಾರ್ಯದರ್ಶಿ ನರೇಂದ್ರ ಶೆಟ್ಟಿಗಾರ್ ಹೆರ್ಗ, ಉಪಾಧ್ಯಕ್ಷ ಸದಾಶಿವ ಗೋಳಿಜೋರ ಕಿನ್ನಿಗೋಳಿ, ದತ್ತರಾಜ ಶೆಟ್ಟಿಗಾರ್, ಸರೋಜಾ ಶೆಟ್ಟಿಗಾರ್ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!