Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಹದಿಹರೆಯದ ಶಿಕ್ಷಣ ಮಾಹಿತಿ ಹ್ಯಾಪಿ ಟೀನ್

ಹದಿಹರೆಯದ ಶಿಕ್ಷಣ ಮಾಹಿತಿ ಹ್ಯಾಪಿ ಟೀನ್

ಸುದ್ದಿಕಿರಣ ವರದಿ
ಬುಧವಾರ, ಜೂನ್ 15

ಹದಿಹರೆಯದ ಶಿಕ್ಷಣ ಮಾಹಿತಿ ಹ್ಯಾಪಿ ಟೀನ್
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಈಚೆಗೆ ವಿದ್ಯಾರ್ಥಿನಿಯರಿಗಾಗಿ ಹ್ಯಾಪಿ ಟೀನ್ ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರ ಆಯೋಜಿಸಲಾಯಿತು.

ಸಂಸ್ಥೆಯ ಪೂರ್ವವಿದ್ಯಾರ್ಥಿನಿ, ರ್ಯಾಂಕ್ ವಿಜೇತೆ ಡಾ. ಸ್ವಾತಿ ಶೇಟ್ ಕಾರ್ಯಾಗಾರ ನಡೆಸಿಕೊಟ್ಟರು.

ಹದಿಹರೆಯದ ಸಮಯದಲ್ಲಿ ವಿದ್ಯಾರ್ಥಿನಿಯರಲ್ಲಾಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳಿಗೆ ಗಿಡಮೂಲಿಕೆಗಳ ಸಹಾಯದಿಂದ ಮನೆ ಮದ್ದು ತಯಾರಿ ಬಗೆಯನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.

ಸಂಸ್ಥೆ ಪ್ರಾಂಶುಪಾಲೆ ಚಿಂತನಾ ರಾಜೇಶ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಚೈತ್ರಾ ಎಂ. ಪಿ. ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕಿಯರಾದ ಸರೋಜ ಆರ್., ಆಶಾಲತಾ ಎಸ್. ಶೆಟ್ಟಿ, ಪವಿತ್ರಾ ಎಸ್. ಪುತ್ರನ್, ರಂಜನಿ ಕಾರ್ಯಕ್ರಮ ಸಂಯೋಜಿಸಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!