ಸುದ್ದಿಕಿರಣ ವರದಿ
ಭಾನುವಾರ, ಜುಲೈ 10
ನಿಲ್ಲದ ವರುಣನ ಆರ್ಭಟ: ಜುಲೈ 11ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ
ಉಡುಪಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ 24 ಗಂಟೆಯಲ್ಲಿ ಇನ್ನಷ್ಟು ಮಳೆಯ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ನೀಡಿದ್ದಾರೆ.
ಆದರೆ, ಮಳೆಗಾಗಿ ರಜೆ ನೀಡಲಾಗಿದ್ದ ಪದವಿಪೂರ್ವ ಮತ್ತು ಪದವಿ ಕಾಲೇಜುಗಳು, ಡಿಪ್ಲೊಮಾ, ಐಟಿಐ, ಇಂಜಿನಿಯರಿಂಗ್ ಕಾಲೇಜು ಮತ್ತಿತರ ಶೈಕ್ಷಣಿಕ ಸಂಸ್ಥೆಗಳು ಸೋಮವಾರದಿಂದ ಪುನರಾರಂಭಗೊಳ್ಳಲಿದೆ.