Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಕೊರಗ ಸಮುದಾಯದ ಫಲಾನುಭವಿಗೆ ಮನೆ ಹಸ್ತಾಂತರ

ಕೊರಗ ಸಮುದಾಯದ ಫಲಾನುಭವಿಗೆ ಮನೆ ಹಸ್ತಾಂತರ

ಸುದ್ದಿಕಿರಣ ವರದಿ
ಮಂಗಳವಾರ, ಮೇ 10

ಕೊರಗ ಸಮುದಾಯದ ಫಲಾನುಭವಿಗೆ ಮನೆ ಹಸ್ತಾಂತರ
ಮಣಿಪಾಲ: ಇಲ್ಲಿನ ನೆಹರೂ ನಗರದ ಕೊರಗ ಸಮುದಾಯದ ಫಲಾನುಭವಿಗೆ ಉಡುಪಿ ನಗರ ಬಿಜೆಪಿ ವತಿಯಿಂದ ನಿರ್ಮಿಸಲಾದ ದೀನ್ ದಯಾಳ್ ನಿವಾಸ ಮನೆಯನ್ನು ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮನೋಹರ್ ಕಲ್ಮಾಡಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!